ಬಿಹಾರ ಚುನಾವಣೆ ಬಳಿಕ ಸಂಪುಟಕ್ಕೆ ಮೇಜರ್ ಸರ್ಜರಿಗೆ ಮುಂದಾದ ಸಿಎಂ – ಇಂದು ಸಂಪುಟ ಸದಸ್ಯರಿಗೆ ಡಿನ್ನರ್ ಪಾರ್ಟಿ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿ 2.5 ವರ್ಷ ಪೂರ್ಣವಾಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸಲು ಮುಂದಾಗಿದ್ದಾರೆ.

ಇಂದು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಂಪುಟ ಸದಸ್ಯರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ವೇಳೆ ತಮ್ಮ ಬಲ ಹೆಚ್ಚಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಪ್ಲ್ಯಾನ್ ಮಾಡಿದ್ದು, ಈಗ ಸಿಎಂ ಸಿದ್ದರಾಮಯ್ಯ ರಾಜಕೀಯ ನಡೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಬಿಹಾರ ಚುನಾವಣೆ ನಂತರ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸಲು ಸಿಎಂ ಮುಂದಾಗಿದ್ದು, 15ಕ್ಕೂ ಸಚಿವರ ಬದಲಾವಣೆಗೆ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಹಲವು ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದು ಪ್ಲ್ಯಾನ್ ಮಾಡಿಕೊಂಡಿದ್ದು, ಹೈಕಮಾಂಡ್ ಅನುಮತಿ ಒಂದೇ ಬಾಕಿಯಿದೆ.

ಇದನ್ನೂ ಓದಿ : ಕೋರ್ಟ್​ಗೆ ಕರೆತಂದಿದ್ದ ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!

Btv Kannada
Author: Btv Kannada

Read More