ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆ ಇಂದು ಜಿಬಿಎ ಕೇಂದ್ರ ಕಚೇರಿ ಆವರಣದ ಕೆಂಪೇಗೌಡ ಪೌರಸಭಾಂಗಣದಲ್ಲಿ ನಡೆಯಲಿದೆ.
ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಾಧಿಕಾರ ಉಪಾಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದ ಶಾಸಕರು, ವಿಧಾನಪರಿಷತ್ತು ಸದಸ್ಯರು, ಐದು ನಗರ ಪಾಲಿಕೆ ಆಯುಕ್ತರು, ಬೆಸ್ಕಾಂ, ಜಲಮಂಡಳಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಜಿಬಿಎ ಮುಖ್ಯ ಆಯುಕ್ತರು ಸೇರಿದಂತೆ ಪ್ರಾಧಿಕಾರದ 75 ಮಂದಿ ಸದಸ್ಯರು ಭಾಗಿಯಾಗಲಿದ್ದಾರೆ.
ಸಂಜೆ 4 ಗಂಟೆಗೆ ಸಭೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ವೇಳೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ ನಡೆಯಲಿದೆ. ಇನ್ನು ಶಾಸಕರು ತಮ್ಮ ಸಮಸ್ಯೆ, ಕುಂದುಕೊರತೆ ಬಗ್ಗೆ ಸಮಾಲೋಚಿಸಲಿದ್ದಾರೆ.
ಇದನ್ನೂ ಓದಿ : “ಮಹಾಲಯ” ಚಿತ್ರದ ಮುಹೂರ್ತ – ರೋರಿಂಗ್ ಸ್ಟಾರ್ ಶ್ರೀಮುರುಳಿ ಸಾಥ್!
Author: Btv Kannada
Post Views: 270







