ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ – ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ವಿಜಯಲಕ್ಷ್ಮಿ, ಭುವನ್(1.5), ವೃಂದಾ (4) ಮೃತರು.

ಐದು ವರ್ಷದ ಹಿಂದೆ ಮದುವೆಯಾಗಿದ್ದ ರಾಯಚೂರು ಮೂಲದ ದಂಪತಿಗಳು‌‌ ಭುವನೇಶ್ವರಿ ನಗರದಲ್ಲಿ ವಾಸವಾಗಿದ್ದರು. ವಿಜಯಲಕ್ಷ್ಮಿ ಗಂಡ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡ್ತಿದ್ದ. ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ವಿಜಯಲಕ್ಷ್ಮಿ ತಂಗಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

ಸಾವಿನ ಬಗ್ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಕೌಟುಂಬಿಕ ಸಮಸ್ಯೆ ಹಿನ್ನೆಲೆ ಈ ರೀತಿ ಮಾಡಿಕೊಂಡ್ರಾ ಎಂದು ಪೊಲೀಸರು ತನಿಖೆ ನಡೆಸಲಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಇನ್ಶುರೆನ್ಸ್ ಹಣ, ಆಸ್ತಿಗಾಗಿ ಸ್ನೇಹಿತನ ಬರ್ಬರ ಹತ್ಯೆ – ಆರೋಪಿಗಳು ಅರೆಸ್ಟ್!

Btv Kannada
Author: Btv Kannada

Read More