ಖಾಸಗಿ ಬಸ್​​-ಲಾರಿ ಮುಖಾಮುಖಿ ಡಿಕ್ಕಿ – ಮೂವರ ದುರ್ಮರಣ!

ಮೈಸೂರು : ಖಾಸಗಿ ಬಸ್​​-ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.

ಇಂದು ಬೆಳಗ್ಗೆ ಮೈಸೂರಿನಿಂದ ಹುಣಸೂರಿನ ಕಡೆಗೆ ಬರುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿ ಮತ್ತು ಕೇರಳದ ಕ್ಯಾಲಿಕಟ್​​ನಿಂದ ಬೆಂಗಳೂರಿಗೆ ತೆರಳುತಿದ್ದ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಬಸ್ ಚಾಲಕ, ಕ್ಲಿನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಹುಣಸೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ‘ಅಕಾಲ’ ಚಿತ್ರದ ಮುಹೂರ್ತ!

Btv Kannada
Author: Btv Kannada

Read More