ಬೆಂಗಳೂರು : ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಆ.11 ರಂದು ರಾತ್ರಿ ನಡೆದಿದ್ದ ಗಲಭೆ ಪ್ರಕರಣದ ಆರೋಪಿಗಳು ಜಾಮೀನು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಈ ಹಿಂದೆ ಗಲಭೆ ಪ್ರಕರಣದಿಂದ ಮುಕ್ತಿ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈಗ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಆರೋಪಿಗಳಿಗೆ ರಿಲೀಫ್ ಸಿಕ್ಕಿದ್ದು, ಶಾಸಕ ಎಸಿ ಶ್ರೀನಿವಾಸ್ ಬೆಂಬಲದಿಂದಾಗಿ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.

ಜಾಮೀನು ಕೊಡಿಸಲು ಸಹಕರಿಸಿದ ಶಾಸಕ ಎಸಿ ಶ್ರೀನಿವಾಸ್ಗೆ ಮುಸ್ಲಿಂ ಮುಖಂಡ ಅಕ್ರಂ ಅಹಮದ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಮುಸ್ಲಿಂ ಮುಖಂಡ ಅಕ್ರಂ ಅಹಮದ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಶಾಸಕ ಎಸಿ ಶ್ರೀನಿವಾಸ್ ಅವರನ್ನು ಭೇಟಿಯಾಗಿ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯ ಮುಗ್ಧ ವ್ಯಕ್ತಿಗಳನ್ನು ಬಿಡುಗಡೆ ಮಾಡುವಲ್ಲಿ ಅವರ ಪ್ರಯತ್ನ ಮತ್ತು ಬೆಂಬಲಕ್ಕಾಗಿ ಧನ್ಯವಾದ. ಈ ಸಾಧನೆಯ ಕೀರ್ತಿ ಹಿರಿಯ ವಕೀಲ ರೆಹಮತುಲ್ಲಾ ಕೊತ್ವಾಲ್ ಮತ್ತು ತಂಡಕ್ಕೆ ಮಾತ್ರ ಸಲ್ಲುತ್ತದೆ ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ : ಸಾಮಾಜಿಕ ಜಾಲಾತಾಣ ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಅಂಶ ಹಂಚಿಕೊಂಡ ಆರೋಪದಿಂದ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗಲಭೆಗೆ ಕಾರಣವಾಗಿತ್ತು. ಅಂದಿನ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಅವರ ಮನೆಗೆ ಬೆಂಕಿ ಹಚ್ಚಿದ್ದಲ್ಲಿದೇ ಮನೆಯಲ್ಲಿದ್ದ ಎಲ್ಲ ವಸ್ತುಗಳನ್ನು ನಾಶ ಪಡಿಸಿದ್ದರು.
ಇದನ್ನೂ ಓದಿ : ಸತೀಶ್ ಜಾರಕಿಹೊಳಿ ಪುತ್ರನ ಬರ್ತ್ಡೇಗೆ ವಿಶ್ ಮಾಡಲು ಹೋದ ಪೊಲೀಸರಿಗೆ ತೊಂದರೆ – ನೋಟಿಸ್ ಕೊಡಲು ಹಿರಿಯ ಅಧಿಕಾರಿಗಳು ಸೂಚನೆ!







