ಉಡುಪಿ : ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ಸಂಭವಿಸಿದೆ.
ಈ ದಾರುಣ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಸರಳ ಮತ್ತು ಸೌಮ್ಯ ಸ್ವಭಾವದವರಾಗಿದ್ದ ಸುದೀಪ್ ಅವರು ಹೆಬ್ರಿಯಲ್ಲಿ ವೈನ್ ಶಾಪ್ ಒಂದನ್ನು ನಡೆಸುತ್ತಿದ್ದರು. ಸುದೀಪ್ ಭಂಡಾರಿ ಅವರು ಇಂತಹ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲು ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.
ಸುದೀಪ್ ಭಂಡಾರಿಯವರ ಆತ್ಮಹತ್ಯೆ ಸುದ್ದಿ ಕೇಳಿ ಹೆಬ್ರಿ ಪರಿಸರದ ಜನರ ಆಘಾತಗೊಂಡಿದ್ದಾರೆ. ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಇದನ್ನೂ ಓದಿ : ರಾಜ್ಯ ಸರ್ಕಾರದಲ್ಲಿ ರಾತ್ರೋರಾತ್ರಿ ‘ಡಿನ್ನರ್ ಕ್ರಾಂತಿ’ – ಸಚಿವರ ಜೊತೆ ಡಿನ್ನರ್ ಮೀಟ್ ನಡೆಸಿದ ಸಿಎಂ ಸಿದ್ದರಾಮಯ್ಯ!







