ಬೆಂಗಳೂರು : ರಾಜ್ಯ ಸರ್ಕಾರದ ಆದೇಶಕ್ಕೆ ಭಾರೀ ಹಿನ್ನೆಡೆಯಾಗಿದ್ದು, CAT (ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ) ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿದೆ.

ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಸರ್ಕಾರದ ಇಲಾಖಾ ತನಿಖೆ ಆದೇಶ ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದರು. ಇಬ್ಬರು ನ್ಯಾಯಾಧೀಶರ ನಡುವೆ ವಿಭಿನ್ನ ತೀರ್ಪು ಹಿನ್ನೆಲೆ ಸಿಎಟಿ ಮುಖ್ಯಸ್ಥರು ನ್ಯಾಯಮೂರ್ತಿ ರಣ್ಜೀತ್ ಬಳಿ ಹೋಗಿದ್ದರು. ಎರಡೂ ಕಡೆಯ ವಾದ ಪ್ರತಿವಾದ ಆಲಿಸಿ ನ್ಯಾಯಮೂರ್ತಿಗಳು ಇಂದು ತೀರ್ಪು ಪ್ರಕಟಿಸಿದ್ದಾರೆ.
ಇದೀಗ ನ್ಯಾಯಮೂರ್ತಿಗಳು ಸರ್ಕಾರದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿದ್ದಾರೆ. ಹಾಗೆಯೇ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಸಲ್ಲಬೇಕಾದ ಬಡ್ತಿ ಸವಲತ್ತುಗಳನ್ನ ನೀಡುವಂತೆ ಆದೇಶ ನೀಡಿದೆ.
ಇದನ್ನೂ ಓದಿ : ZEE5ನಿಂದ “ಭಾರತ್ ಬಿಂಜ್ ಫೆಸ್ಟಿವಲ್” – ಹೊಸ ಕಥೆಗಳು, ದೀಪಾವಳಿಯ ವಿಶೇಷ ಆಫರ್ಗಳು!
Author: Btv Kannada
Post Views: 594







