ರಷ್ಯಾದ ತೈಲ ಖರೀದಿಗೆ ಪ್ರತಿಯಾಗಿ ಭಾರತದ ವಸ್ತುಗಳ ಮೇಲೆ ದಂಡನಾತ್ಮಕ ಸುಂಕ ವಿಧಿಸಿದ ತಿಂಗಳುಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ರಷ್ಯಾದಿಂದ ತೈಲ ಇನ್ನು ಮುಂದೆ ಖರೀದಿಸುವುದಿಲ್ಲ ಎಂದು ಅವರು ನನಗೆ ಭರವಸೆ ನೀಡಿದ್ದಾರೆ ಎಂದು ಟ್ರಂಪ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಸುಂಕ ಹೇರಿಕೆ ಪ್ರಕ್ರಿಯೆ ತಕ್ಷಣವೇ ನಿಲ್ಲಿಸಲು ಸಾಧ್ಯವಿಲ್ಲ, ಆದರೆ ಪ್ರಕ್ರಿಯೆ ಮುಂದುವರಿದಿದ್ದು ಸದ್ಯದಲ್ಲಿಯೇ ನಿಲ್ಲಲಿದೆ ಎಂದರು. ಟ್ರಂಪ್ ಅವರ ಹೇಳಿಕೆಯನ್ನು ಭಾರತ ತಕ್ಷಣವೇ ದೃಢಪಡಿಸಲಿಲ್ಲ. ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ಹೊರತಾಗಿಯೂ, ಭಾರತ ತನ್ನ ಐತಿಹಾಸಿಕ ಪಾಲುದಾರ ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಿತ್ತು, ಪ್ರಧಾನಿ ಮೋದಿ ಈ ಹಿಂದೆ ಅದನ್ನು ಸಮರ್ಥಿಸಿಕೊಂಡಿದ್ದರು ಕೂಡ.
ಆದರೆ ದ್ವಿಪಕ್ಷೀಯ ಸಂಬಂಧ ಸುಧಾರಣೆ ಮಾಡುವ ದೃಷ್ಟಿಯಿಂದ ಮೋದಿ ಅವರು ನೂತನವಾಗಿ ನೇಮಕಗೊಂಡಿರುವ ಯುಎಸ್ ರಾಯಭಾರಿ, ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಸೆರ್ಗಿಯೊ ಗೋರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಮೂಲಕ ಟ್ರಂಪ್ ಅವರೊಂದಿಗಿನ ಸಂಬಂಧವನ್ನು ಸರಿಪಡಿಸುವ ಬಯಕೆಯನ್ನು ತೋರಿಸಿದಂತೆ ಕಂಡುಬಂದಿದೆ.
ಅಮೆರಿಕಾದಲ್ಲಿ ಟ್ರಂಪ್ ಆಡಳಿತವು ಭಾರತದೊಂದಿಗಿನ ಸಂಬಂಧವನ್ನು ಗೌರವಿಸುತ್ತದೆ. ಟ್ರಂಪ್ ಮತ್ತು ಮೋದಿ ನಡುವಿನ ದೂರವಾಣಿ ಮಾತುಕತೆ ಬಗ್ಗೆ ಆಶಾವಾದಿಗಳಾಗಿದ್ದೇವೆ ಎಂದಿದ್ದಾರೆ.
ಇದನ್ನೂ ಓದಿ : ದೀಪಾವಳಿಗೆ ಗುಡ್ನ್ಯೂಸ್ ಕೊಟ್ಟ KMF – ಸಕ್ಕರೆ ರಹಿತ ನಂದಿನಿ ಸ್ವೀಟ್ಸ್ ರಿಲೀಸ್!







