ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹುಸಿ ಬಾಂಬ್ ಬೆದರಿಕೆ ಕರೆ ಹೆಚ್ಚಾಗುತ್ತಿದ್ದು,ಈ ಹಿನ್ನೆಲೆ ಬುಧವಾರವಷ್ಟೇ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ತಮಿಳುನಾಡಿನ ವ್ಯಕ್ತಿಯೋರ್ವನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಆರ್ನಾ ಅಶ್ವಿನ್ ಶೇಖರ್ (aarna.ashwinshekher@outlook.com) ಎಂಬಾತನ ಐಡಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಇ-ಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಆರು ಆರ್ಡಿಎಕ್ಸ್ ಬಾಂಬ್ಗಳು ಇಬ್ಬರ ಮನೆಯಲ್ಲೂ ಫಿಕ್ಸ್ ಆಗಿದೆ. ರಿಮೋಟ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಬಾಂಬ್ ಸ್ಕ್ವಾಡ್ ತಕ್ಷಣ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಹುಸಿಬಾಂಬ್ ಕರೆ ಬಂದ ಹಿನ್ನೆಲೆ ಅಶ್ವತ್ಥ್ ನಾರಾಯಣಸ್ವಾಮಿ ಎಂಬುವವರ ದೂರು ಆಧರಿಸಿ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ಕೆಂಪೇಗೌಡ ಏರ್ಪೋರ್ಟ್ ರೋಡ್ ಅವ್ಯವಸ್ಥೆ – ರಸ್ತೆ ಬಂದ್ ಮಾಡಿ ಗ್ರಾಮಸ್ಥರಿಂದ ಪ್ರೊಟೆಸ್ಟ್!







