ಸರ್ಕಾರಿ ಸ್ಥಳಗಳಲ್ಲಿ RSS ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು ಇದೇ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.
ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪನನ್ನು ಲಾತೂರ್ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
RSS ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ಮನೋಹರ್ ಎನ್ನುವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ : ಈ ವಾರದ ನ್ಯೂಸ್ ಚಾನೆಲ್ TRP ಬಿಡುಗಡೆ.. NEWS-18 ಕನ್ನಡ ಸುದ್ದಿ ವಾಹಿನಿ ನಂಬರ್-1







