ಬೆಂಗಳೂರು : ನಮ್ಮ ಮೆಟ್ರೋ ಯೋಜನೆಯನ್ನು ಮಾದಾವರದಿಂದ ತುಮಕೂರುವರೆಗೆ ವಿಸ್ತರಿಸುವ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ವಿಧಾನಸೌಧ ಕಾರ್ಯಾಲಯದಲ್ಲಿ ಮಹತ್ವದ ಸಭೆ ನಡೆಸಿದರು. ನಗರಾಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿ, ಯೋಜನೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಗ್ರೀನ್ ಲೈನ್ ಮಾರ್ಗವನ್ನು ಮಾದಾವರದಿಂದ ತುಮಕೂರುವರೆಗೆ ಸುಮಾರು 59.6 .ಕಿ. ಮೀ ವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಸಲಾಗಿದೆ.

ಈ ಮೆಟ್ರೋ ವಿಸ್ತರಣೆಯು ಬೆಂಗಳೂರು ಮತ್ತು ತುಮಕೂರು ನಡುವಿನ ಸಂಪರ್ಕವನ್ನು ಹೆಚ್ಚಿಸಲಿದೆ. ಇದರಿಂದ ಪ್ರಯಾಣಿಕರಿಗೆ ಮತ್ತು ಉದ್ಯೋಗ ಅರಸುವವರಿಗೆ ಅನುಕೂಲವಾಗಲಿದೆ. ಬೆಂಗಳೂರು-ತುಮಕೂರು ನಡುವಿನ ಸಂಚಾರವನ್ನು ಸುಗಮಗೊಳಿಸುವ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ಮೆಟ್ರೋ ವಿಸ್ತರಣೆ ಮಹತ್ವದ ಹೆಜ್ಜೆಯಾಗಿದೆ.

ಇದನ್ನು ಓದಿ : ರೌಡಿಶೀಟರ್ ಬಿಕ್ಲ ಶಿವ ಕೊಲೆ ಕೇಸ್ – ಕೊಕಾ ಆ್ಯಕ್ಟ್ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ.. ಅ.23ಕ್ಕೆ ವಿಚಾರಣೆ ಮುಂದೂಡಿಕೆ!







