ಬೆಂಗಳೂರು : ಹಾಡಹಗಲೇ ಕತ್ತು ಕೂಯ್ದು ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗ ರೈಲ್ವೆ ಟ್ರಾಕ್ ಬಳಿ ನಡೆದಿದೆ. ಯಾಮಿನಿ ಪ್ರಿಯಾ ಕೊಲೆಯಾದ ವಿದ್ಯಾರ್ಥಿನಿ.
ವಿಘ್ನೇಶ್ ಎಂಬಾತ ಯುವತಿ ಯಾಮಿನಿ ಪ್ರಿಯಾಳನ್ನು ಹರಿತವಾದ ಆಯುಧದಿಂದ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಲವ್ ಮಾಡಲು ಯಾಮಿನಿ ಒಪ್ಪದಿರುವುದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬಿ ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಪ್ರಿಯಾ, ಎಕ್ಸಾಮ್ ಇದೆ ಎಂದು ಇಂದು ಬೆಳಗ್ಗೆ ಏಳು ಗಂಟೆಗೆ ಮನೆಯಿಂದ ಕಾಲೇಜಿಗೆ ಹೋಗಿದ್ದು, ಮಧ್ಯಾಹ್ನ ಕಾಲೇಜ್ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ನಲ್ಲಿ ಬಂದ ದುಷ್ಕರ್ಮಿ, ಪ್ರಿಯಾಳ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಶ್ರೀರಾಮ ಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಲವ್ ವಿಚಾರಕ್ಕೆ ಈ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ತನಿಖೆ ನಡೆಸಿದ್ದಾರೆ.
ಇದನ್ನೂ ಓದಿ : ಮೈಸೂರಿನಲ್ಲಿ ACPಗೆ ಒಂದು ಕೋಟಿ, ಇನ್ಸ್ಪೆಕ್ಟರ್ಗೆ 75 ಲಕ್ಷ ಫಿಕ್ಸ್ – ವಿಶ್ವನಾಥ್ ಗಂಭೀರ ಆರೋಪ!







