ಹಾವೇರಿ : ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH-48) ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 21ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ನಡೆದಿದೆ. ನಿಂಗಮ್ಮ, ಚಮಾನ್ ಸಾಬ್, ಮಹಿಬೂಬೂ ಸಾಬ್ ಮೃತರು.

ಟಾಟಾ ಏಸ್ ಗೂಡ್ಸ್ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಮೆಕ್ಕೆಜೋಳ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದಿದೆ. ವೆಂಕಟಾಪುರ ಗ್ರಾಮಕ್ಕೆ ಹಬ್ಬದ ಊಟಕ್ಕೆಂದು ತೆರಳಿದ್ದ ಕುಟುಂಬಸ್ಥರು ವಾಪಸು ತೆರಳುವಾಗ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 21ಕ್ಕೂ ಹೆಚ್ಚು ಜನರು ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣವೇ ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : ಕುಡಿದ ಮತ್ತಲ್ಲಿ ಹೆತ್ತ ತಾಯಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿ ಮಗ!







