ಬೆಂಗಳೂರಿನ BMS ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್!

ಬೆಂಗಳೂರು : ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಬಿಎಂಎಸ್ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲೇಜಿನ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪಿ, ಅತ್ಯಾಚಾರ ಎಸಗಿದ್ದಾನೆ. ಸದ್ಯ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆಯನ್ನು ಪುರುಷರ ಶೌಚಗೃಹದೊಳಕ್ಕೆ ಎಳೆದೊಯ್ದ ಆರೋಪಿ ಅಲ್ಲಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಅಲ್ಲದೆ, ಬಲವಂತ ಮಾಡಿದ್ದಾನೆ. ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯಿಂದ ಆಘಾತಗೊಂಡ ವಿದ್ಯಾರ್ಥಿನಿ ಈ ವಿಚಾರವನ್ನು ಆಪ್ತ ಸ್ನೇಹಿತರ ಬಳಿ ಹೇಳಿಕೊಂಡಿದ್ದಾಳೆ. ಅವರು ಆಕೆಗೆ ಧೈರ್ಯ ತುಂಬಿ ಪೋಷಕರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ನಂತರ ಪೊಲೀಸರ ಜತೆ ಹನುಮಂತನಗರ ಠಾಣೆಗೆ ತೆರಳಿ ಸಂತ್ರಸ್ತೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನು ಓದಿ : ಗೂಡ್ಸ್ ವಾಹನ – ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು!

 

Btv Kannada
Author: Btv Kannada

Read More