ಸಚಿವ ಪ್ರಿಯಾಂಕ್​ ಖರ್ಗೆ ಕ್ಷೇತ್ರದಲ್ಲಿ RSS ಪಥಸಂಚಲನಕ್ಕೆ ನಕಾರ – ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ!

ಕಲುರ್ಬುಗಿ : ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ್ ಅವರು ಅನುಮತಿ ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು RSS ಕಾರ್ಯಕರ್ತರು ನಿಂದಿಸಿರುವ ಹಿನ್ನೆಲೆ. ಅದೇ ಮಾರ್ಗದಲ್ಲಿ ಭೀಮ್ ಆರ್ಮಿಯೂ ಸಹ ಪಥಸಂಚಲನ ಆಯೋಜಿಸಿರುವುದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಈ ಎರಡೂ ಅಂಶಗಳಿಂದಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯನ್ನು ಮನಗಂಡು ತಹಶೀಲ್ದಾರ್ ಅವರು ಅನುಮತಿ ನಿರಾಕರಿಸಿದ್ದಾರೆ.

ತಹಶೀಲ್ದಾರ್ ಅವರ ಈ ಆದೇಶದ ವಿರುದ್ಧ RSS ಕಾರ್ಯಕರ್ತರು ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ. ಈ ಬೆಳವಣಿಗೆಯು ಕ್ಷೇತ್ರದಲ್ಲಿ ರಾಜಕೀಯ ಹಾಗೂ ಕೋಮು ಸಾಮರಸ್ಯದ ದೃಷ್ಟಿಯಿಂದ ಮಹತ್ವದ ತಿರುವನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಈಗಾಗಲೇ RSS ಚಟುವಟಿಕೆಗಳ ಕುರಿತು ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ.

ಇದನ್ನು ಓದಿ : ದೆಹಲಿಯ ರಾಜ್ಯಸಭಾ ಸಂಸದರ ಅಪಾರ್ಟ್‌ಮೆಂಟ್‌ಗಳಲ್ಲಿ ಬೆಂಕಿ ಅವಘಡ – ಹಲವರಿಗೆ ಗಾಯ!

 

Btv Kannada
Author: Btv Kannada

Read More