ಮಂಡ್ಯದಲ್ಲಿ 3 KSRTC ಬಸ್​ಗಳ ನಡುವೆ ಭೀಕರ ಅಪಘಾತ – ಮೂವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ!

ಮಂಡ್ಯ : ಮೂರು KSRTC ಬಸ್​ಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.

ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು KSRTC ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಹಿಳೆ ಮತ್ತು ಓರ್ವ ಪುರುಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಗಂಭೀರ ಗಾಯಗೊಂಡವರನ್ನು ಮಂಡ್ಯ ಮತ್ತು ಮೈಸೂರಿನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಳವಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ಮೂವರ ವಿವರ ಕಲೆ ಹಾಕುತ್ತಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ :ನಾಡಿನಾದ್ಯಂತ ದೀಪಾವಳಿ ಸಂಭ್ರಮ – ಕೆ.ಆರ್​ ಮಾರ್ಕೆಟ್​​ನಲ್ಲಿ ಹೂವು-ಹಣ್ಣು ಖರೀದಿಗೆ ಮುಗಿಬಿದ್ದ ಜನ!

Btv Kannada
Author: Btv Kannada

Read More