ಬೆಂಗಳೂರಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು : ದೀಪಾವಳಿ ಸಂಭ್ರಮದ ನಡುವೆಯೂ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಿಂದಾಗಿ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿಯೂ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಗಾಳಿಯು ಗಂಟೆಗೆ 30-40ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನು ಓದಿ : ಅಜ್ಜಿಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಮುಖ್ಯ ಶಿಕ್ಷಕ – ವಿಡಿಯೋ ವೈರಲ್!​​

Btv Kannada
Author: Btv Kannada

Read More