ಬೆಂಗಳೂರು : ರಾಜ್ಯಕ್ಕೆ ಕೊಡಬೇಕಾದ ದುಡ್ಡನ್ನು ಸಂಸದರು ಕೇಂದ್ರದ ಬಳಿ ಕೇಳಲ್ಲ, ದಕ್ಷಿಣದಲ್ಲಿ ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಕೂಡ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವೈಟ್‌ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಿ.ವಿ.ಕೆ ಐಯ್ಯಂಗಾರ್ ರಸ್ತೆಯ ಆರ್.ಟಿ ಸ್ಟ್ರೀಟ್ ಜಂಕ್ಷನ್‌ನಲ್ಲಿ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸಂಸದರು ಕರ್ನಾಟಕಕ್ಕೆ ಕೊಡಬೇಕಾದ ದುಡ್ಡು ಕೇಳಲ್ಲ, ಪಿಸಿ ಮೋಹನ್ ಕೇಳಲಿಲ್ಲ, ಅವನು ಯಾರು ಸೌತ್ ಅಲ್ಲಿ ಇದಾನಲ್ಲ ಅಮಾವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದ ಬಳಿ ಹಣ ಕೇಳಲಿಲ್ಲ, ಆಯಮ್ಮ ಶೋಭಾ ಕರಂದ್ಲಾಜೆ ಕೂಡ ಹಣ ತರಲ್ಲ. ಮಂತ್ರಿ ಆಗಿರುವ ಕುಮಾರಸ್ವಾಮಿ ಕೂಡ ಕೇಂದ್ರದ ಬಳಿ ಹಣ ಕೇಳಿಲ್ಲ. ಅದಕ್ಕೆ ಕುಮಾರಸ್ವಾಮಿ ಸೇರಿ ಎಲ್ಲ ಎಂಪಿಗಳನ್ನು ಸೋಲಿಸಿ ಎಂದು ಕರೆ ನೀಡಿದರು.
ಇದನ್ನೂ ಓದಿ : ಬೆಂಗಳೂರಿನಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸ – ಮೂವರು ಕಿಡಿಗೇಡಿಗಳು ವಶಕ್ಕೆ!







