ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ – ಕರ್ನಾಟಕದ ನಾಲ್ವರು ಸಾವು!

ಬೀದರ್ : ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೀದರ್​ ಮೂಲದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರು ಬೀದರ್ ತಾಲೂಕಿನ ಖಾಶೆಂಪೂರ್​ ಗ್ರಾಮದ ನಿವಾಸಿಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಉಮ್ಮರ್ಗಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಕುಮಾರ್​, ರತಿಕಾಂತ, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ.

ದೀಪಾವಳಿ ಹಬ್ಬ  ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ಬೀದರ್ ಮೂಲದ ಐವರು ಸ್ನೇಹಿತರು ತೆರಳಿದ್ದರು. ದರ್ಶನ ಮುಗಿಸಿ ಹಿಂದಿರುಗುವಾಗ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಇಂದು ಬೆಳಗಿನ ಜಾವ ದುರಂತ ಸಂಭವಿಸಿದ್ದು, ಐವರು ಸ್ನೇಹಿತರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ತೇಜಸ್ವಿ ಸೂರ್ಯ ಒಬ್ಬ ಅಮಾವಾಸ್ಯೆ – ಗುಡುಗಿದ ಸಿಎಂ ಸಿದ್ದರಾಮಯ್ಯ!

Btv Kannada
Author: Btv Kannada

Read More