ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ತಿಕ್, ಗ್ಲೆನ್ ಹಾಗೂ ಸುಯೋಗಾ ಬಂಧಿತ ಮೂವರು ಆರೋಪಿಗಳು. ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಅವರು ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಮಾದನಾಯಕನಹಳ್ಳಿ ಗಂಗೊಂಡನಹಳ್ಳಿ ಪ್ರದೇಶದ ಮನೆಯೊಂದರಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ವಾಸವಾಗಿದ್ದರು. ಈ ವೇಳೆ ಐವರು ಆರೋಪಿಗಳು ಸ್ಥಳದಲ್ಲಿದ್ದು, ಅವರಲ್ಲಿ ಮೂವರು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಮಾದನಾಯಕನಹಳ್ಳಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ಡಕಾಯಿತಿ (ದರೋಡೆ) ಹಾಗೂ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ.

ಪ್ರಕರಣದ ಕುರಿತು ತನಿಖೆ ನಡೆಸಲು ಮತ್ತು ಆರೋಪಿಗಳನ್ನು ಪತ್ತೆ ಹಚ್ಚಲು ಮೂರು ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ತೀವ್ರ ಕಾರ್ಯಾಚರಣೆ ಬಳಿಕ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರ ಹುಡುಕಾಟ ಮುಂದುವರಿದಿದೆ.
ಇದನ್ನು ಓದಿ : ನನ್ನ ವಿಚ್ಛೇದನವನ್ನು ಸಂಭ್ರಮಿಸಿ ಕೆಲವರು ತೀರ್ಪು ಕೊಟ್ಟಿದ್ದು ನೋವು ಕೊಡುತ್ತಿತ್ತು – ನಟಿ ಸಮಂತಾ ಬೇಸರ..!







