ಮೈಸೂರು : ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನು ಇದ್ದರೂ ಸಹ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಮಾನವೀಯ ಮುಂದುವರೆದಿದೆ. ಹನುಗನಹಳ್ಳಿಯ ಐಷಾರಾಮಿ ಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲವನ್ನು ಪತ್ತೆ ಮಾಡಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಹೆಣ್ಣು ಭ್ರೂಣ ಲಿಂಗ ಪತ್ತೆ ಹತ್ಯೆ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಭ್ರೂಣ ಹತ್ಯೆ ಮಾಡ್ತಿದ್ದ ಮನೆ ಮೇಲೆ ಆರೋಗ್ಯ ಇಲಾಖೆ ರೇಡ್ ಮಾಡಿದ್ದು, ಭ್ರೂಣ ಹತ್ಯೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಆರೋಗ್ಯ ಇಲಾಖೆ ಡಿಡಿ ವಿವೇಕ್, ಮಂಡ್ಯ DHO ಮೋಹನ್, ಮೈಸೂರು DHO ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಭ್ರೂಣ ಹತ್ಯೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ಗ್ರಾಮೀಣ ಭಾಗದ ಮಹಿಳೆಯರೇ ಇವರ ಟಾರ್ಗೆಟ್ ಆಗಿದ್ದು, ಕಿಡಿಗೇಡಿಗಳು ಲಕ್ಷ ಲಕ್ಷ ಹಣ ಪಡೆದು ಸ್ಕ್ಯಾನಿಂಗ್ ಮಾಡ್ತಿದ್ದರು. ಹೊಟ್ಟೆಯಲ್ಲಿರುವ ಮಗು ಗಂಡೋ, ಹೆಣ್ಣೋ ಎಂದು ಸ್ಕ್ಯಾನಿಂಗ್ ಮಾಡಿ ಬಳಿಕ ಹೆಣ್ಣು ಮಗುವಾದರೆ ಗರ್ಭಪಾತ ಮಾಡುವ ಕೃತ್ಯವೆಸಗುತ್ತಿದ್ದರು. ದಾಳಿ ವೇಳೆ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಮನೆಯಲ್ಲಿ ಗುಂಪು ಸೇರಿಸಿ ಜೂಜಾಟ – PSI ಹಗರಣದ ಆರೋಪಿ ದಿವ್ಯಾ ಹಾಗರಗಿ ಸೇರಿ 7 ಮಂದಿ ಅರೆಸ್ಟ್, 42 ಸಾವಿರ ಜಪ್ತಿ!







