ರಾಜಕಾರಣಿಯಾದ ಕರುನಾಡ ಚಕ್ರವರ್ತಿ – ‘ಗುಮ್ಮಡಿ ನರಸಯ್ಯ’ ಫಸ್ಟ್ ಲುಕ್ ರಿಲೀಸ್!

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೊಸ ಸಿನಿಮಾ ದೀಪಾವಳಿ ಹಬ್ಬದ ವಿಶೇಷವಾಗಿ ಘೋಷಣೆಯಾಗಿದೆ. ರಾಜಕಾರಣಿಯಾಗಿ ಶಿವಣ್ಣ ಪ್ರತ್ಯಕ್ಷರಾಗಿದ್ದಾರೆ. ಆಂಧ್ರ ಮೂಲದ ಯೆಲ್ಲಾಂಡು ರಾಜಕಾರಣಿ ಗುಮ್ಮಡಿ ನರಸಯ್ಯ ಜೀವನಗಾಥೆಯಲ್ಲಿ ಕರುನಾಡ ಕಿಂಗ್ ಮಿಂಚಲಿದ್ದಾರೆ.

ತೆಲುಗು ಸಿನಿಮಾಗಳಾದ ಚಿರು ಗೋಡವಾಲು, ಲಾವಣ್ಯ ವಿತ್ ಲವ್ ಬಾಯ್ಸ್ ಮುಂತಾದ‌ ಸಿನಿಮಾಗಳಲ್ಲಿ ನಟಿಸಿರುವ ಪರಮೇಶ್ವರ್ ಹಿವ್ರಲೆ‌ ಗುಮ್ಮಡಿ‌ ನರಸಯ್ಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ.

ಸೈಕಲ್ ತಳ್ಳುತ್ತಾ , ಹೆಗಲಿಗೆ ಕೆಂಪು ಶಾಲು ಹಾಕಿಕೊಂಡು, ಕನ್ನಡಕ ಹಾಕಿಕೊಂಡ ಸರ್ಕಾರಿ ಕಚೇರಿ ಮುಂದೆ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಎನ್.ಸುರೇಶ್ ರೆಡ್ಡಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ‘ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನ್ಯೂ ಡಿಮಾಕ್ರಸಿ’ ಅಥವಾ ಸಿ’ಪಿಐ’ನ ಸದಸ್ಯರಾಗಿರುವ ಗುಮ್ಮಡಿ ನರಸಯ್ಯ 1983-1994 2 1999-2009 8 ನಡುವೆ ಯೆಲ್ಲಾಂಡುವಿನ ತೆಲಂಗಾಣ ವಿಧಾನಸಭೆಯ ಸದಸ್ಯರಾಗಿದ್ದರು.

‘ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ತೆಲುಗು ಸೇರಿದಂತೆ ಎಲ್ಲಾ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದೆ. ಐದು ಬಾರಿ ಶಾಸಕರಾಗಿದ್ದರೂ ಇವರು ಸೈಕಲ್ ನಲ್ಲಿಯೇ ಓಡಾಟ, ರಸ್ತೆ ಬದಿಯಲ್ಲಿ ಊಟ, ಹಳೆ ಮನೆಯಲ್ಲಿಯೇ ವಾಸ ಮಾಡುತ್ತಿದ್ದರು.

ಇದನ್ನು ಓದಿ : ಮಾದನಾಯಕನಹಳ್ಳಿ ಗ್ಯಾಂಗ್ ರೇಪ್ ಪ್ರಕರಣ – 6 ಮಂದಿ ಅರೆಸ್ಟ್, ಓರ್ವ ಆರೋಪಿಗಾಗಿ ಪೊಲೀಸರ ಹುಡುಕಾಟ!

Btv Kannada
Author: Btv Kannada

Read More