ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ – ಸಚಿವ ಅಶ್ವಿನಿ ವೈಷ್ಣವ್​ಗೆ ಪ್ರಹ್ಲಾದ್ ಜೋಶಿ ಧನ್ಯವಾದ!

ಬೆಂಗಳೂರು : ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದು, ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಬೆಂಗಳೂರು ಮತ್ತು ಮುಂಬೈ ನಡುವೆ ಸಂಚರಿಸುವ ಬಹುನಿರೀಕ್ಷಿತ ಸೂಪರ್ ಫಾಸ್ಟ್ ರೈಲು ಯೋಜನೆಗೆ ಅನುಮೋದನೆ ನೀಡಿದ್ದಾರೆ. ಈ ರೈಲಿಗೆ ಅನುಮೋದನೆ ನೀಡಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಪ್ರಹ್ಲಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಮ್ಮ ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗವಾಗಿ ವಾಣಿಜ್ಯ ನಗರಿ ಮುಂಬೈಗೆ ಸಂಚಾರಿಸಲಿದ್ದು, ಲಕ್ಷಾಂತರ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ‌ ಹಾಗೂ ವ್ಯಾಪಾರ‌ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ ಎಂದರು.

ಈ ಹೊಸ ರೈಲು ಪ್ರಾರಂಭಿಸಲು ಅನುವು ಮಾಡಿಕೊಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮತ್ತು ಆತ್ಮೀಯ ಸಹೋದ್ಯೋಗಿ ಮಿತ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಸಚಿವ ಪ್ರಹ್ಲಾದ್ ಜೋಶಿ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನು ಓದಿ ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅ.28ಕ್ಕೆ ಪಿ-ಕ್ಯಾಪ್ ವಿತರಣೆ – ಸರ್ಕಾರ ಆದೇಶ!

 

Btv Kannada
Author: Btv Kannada

Read More