ಬೆಂಗಳೂರು : ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ ಎರ್ಟಿಗಾ ಕಾರು ಬರುತ್ತಿತ್ತು. ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಈ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದ್ದು ಕಾರಿನಲ್ಲಿ ಐವರ ಪೈಕಿ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಶಿವಲಿಂಗ ಗೌಡ(60), ಪ್ರಮೀಳಾ (55) ಮೃತಪಟ್ಟಿದ್ದಾರೆ. ಕಾರಿನಲ್ಲಿ ಕುಟುಂಬ ಸದಸ್ಯರು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದರು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.
ಇದನ್ನು ಓದಿ : ಪೊಲೀಸರಿಗೆ ಸೌಜನ್ಯದ ಭಾಷೆ ಗೊತ್ತೇ? – ಪೊಲೀಸರನ್ನೇ ತರಾಟೆಗೆ ತೆಗೆದುಕೊಂಡ ಹೈಕೋರ್ಟ್!
Author: Btv Kannada
Post Views: 309







