ಕಲಬುರಗಿ : ಇದೇ ನವೆಂಬರ್ 2 ರಂದು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದರ RSS ಗೆ ಇಂದು ನಿರಾಸೆಯಾಗಿದೆ. ಪಥಸಂಚಲನಕ್ಕೆ ಅನುಮತಿ ಕೋರಿ RSS ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಕಲಬುರಗಿ ಹೈಕೋರ್ಟ್ ಪೀಠವು ಪೂರ್ಣಗೊಳಿಸದೆ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದೆ.

ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದು, ಯಾವುದೇ ಅಂತಿಮ ಆದೇಶವನ್ನು ನೀಡಲಿಲ್ಲ. ಹೈಕೋರ್ಟ್ ಪೀಠವು ಅಕ್ಟೋಬರ್ 28 ರಂದು ಚಿತ್ತಾಪುರದಲ್ಲಿನ ಎಲ್ಲಾ ಸಂಘಟನೆಗಳೊಂದಿಗೆ ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಚಿತ್ತಾಪುರದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ಶಾಂತಿ ಸಭೆ ಹಾಗೂ ಪರಿಸ್ಥಿತಿಯ ಕುರಿತು ಅಕ್ಟೋಬರ್ 30 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಕೋರ್ಟ್ ತಿಳಿಸಿದೆ. ಈ ವರದಿಯ ಆಧಾರದ ಮೇಲೆ ಹೈಕೋರ್ಟ್ ಅಂತಿಮ ತೀರ್ಪು ನೀಡಲಿದೆ.

ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಾಧೀಶರಾದ ಎಮ್‌ಜಿಎಸ್ ಕಮಲ್ ಅವರು ಈ ಸೂಚನೆಗಳನ್ನು ನೀಡಿದ್ದಾರೆ. ನವೆಂಬರ್ 2 ರ ಪಥಸಂಚಲನಕ್ಕೆ ಇಂದು ಅನುಮತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ RSS ಮುಖಂಡರಿಗೆ ಇದರಿಂದ ಹಿನ್ನಡೆಯಾದಂತಾಗಿದೆ. ಪಥಸಂಚಲನಕ್ಕೆ ಅನುಮತಿ ಸಿಗುತ್ತದೆಯೇ ಇಲ್ಲವೇ ಎಂಬುದು ಈಗ ಅಕ್ಟೋಬರ್ 30 ರಂದು ನ್ಯಾಯಾಲಯ ನೀಡುವ ತೀರ್ಪಿನ ಮೇಲೆ ನಿರ್ಧಾರವಾಗಲಿದೆ.
ಇದನ್ನೂ ಓದಿ : ಮೂರೇ ವಾರಕ್ಕೆ ‘ಕಾಂತಾರ ಚಾಪ್ಟರ್-1’ ಹೊಸ ಮೈಲಿಗಲ್ಲು- ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ 818ಕ್ಕೂ ಹೆಚ್ಚು ಕೋಟಿ ಗಳಿಕೆ!







