ಬೆಂಗಳೂರು : ಬ್ಯಾಂಕಾಕ್ನಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ ಮಾಡ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಏರ್ಪೋರ್ಟ್ನ ಕಸ್ಟಮ್ಸ್ ಅಧಿಕಾರಿಗಳು 27 ವರ್ಷದ ಪ್ರಯಾಣಿಕನನ್ನು ಅರೆಸ್ಟ್ ಮಾಡಿದ್ದು, ಲಗೇಜ್ ಪರಿಶೀಲನೆ ವೇಳೆ ಬ್ಯಾಗ್ನಲ್ಲಿ ಪ್ರಾಣಿಗಳಿರುವುದು ಪತ್ತೆಯಾಗಿದೆ. ಬಳಿಕ ಏರ್ಪೋರ್ಟ್ನ ಕಸ್ಟಮ್ಸ್ ಅಧಿಕಾರಿಗಳು ಲಗೇಜ್ ಸಮೇತ ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.

ವನ್ಯಜೀವಿ ಸಂರಕ್ಷಣಾ ಖಾಯ್ದೆಯಡಿ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪ್ರಯಾಣಿಕನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿ ಹುಚ್ಚಾಟ – ಬೇರೆಯವರ ಮನೆಯ ಬಾಗಿಲು, ಕಿಟಕಿ ಹೊಡೆದು ‘RSI’ಯ ಅಸಭ್ಯ ವರ್ತನೆ!
Author: Btv Kannada
Post Views: 330







