ಮೈಸೂರು : ಸ್ನಾನ ಮಾಡುವಾಗ ಉಸಿರುಗಟ್ಟಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಬೆಟ್ಟದಪುರ ಗ್ರಾಮದ ನಿವಾಸಿಗಳಾದ 23 ವರ್ಷದ ಗುಲ್ಫಾರ್ಮ್ ಮತ್ತು ಆಕೆಯ ತಂಗಿ 20 ವರ್ಷದ ಸಿಮ್ರಾನ್ ಮೃತ ದುರ್ದೈವಿಗಳು.

ಗುಲ್ಫಾರ್ಮ್, ಸಿಮ್ರಾನ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದರು. ಆದರೆ, ಬಹಳ ಸಮಯ ಕಳೆದರೂ ಅವರು ಸ್ನಾನದ ಕೋಣೆಯಿಂದ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್ ಅವರು ಬಾತ್‌ರೂಂ ಬಾಗಿಲನ್ನು ಬಡಿದಿದ್ದಾರೆ. ಬಳಿಕ ಬಾಗಿಲು ತೆರೆದು ನೋಡಿದಾಗ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ, ಆಸ್ಪತ್ರೆಗೆ ಹೋಗುವಷ್ಟರಲ್ಲೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.

ಗ್ಯಾಸ್ ಗೀಸರ್ ಸಿಲಿಂಡರ್ ಸೋರಿಕೆಯಿಂದ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮೈಸೂರು ಚಾಮುಂಡೇಶ್ವರಿ ತಾಯಿಯ ಸನ್ನಿಧಿಯಲ್ಲಿ “ಜುಮ್ಕಿ” ಚಿತ್ರದ ಸ್ಕ್ರಿಪ್ಟ್ ಪೂಜೆ!







