ಬೆಂಗಳೂರು : ಬೆಂಗಳೂರು ನಗರದಲ್ಲಿ ಅಕ್ರಮ ಸಂಬಂಧ ದುರಂತ ಅಂತ್ಯ ಕಂಡಿದ್ದು, 35 ವರ್ಷದ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿ ಮೃತದೇಹವನ್ನು ಆಟೋದಲ್ಲಿ ಬಿಸಾಡಿ ಪರಾರಿಯಾಗಿರುವ ಘಟನೆ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು 35 ವರ್ಷದ ಸಲ್ಮಾ ಎಂದು ಗುರುತಿಸಲಾಗಿದೆ. ಸಲ್ಮಾಗೆ ಮದುವೆಯಾಗಿದ್ದು, ನಾಲ್ಕು ಮಕ್ಕಳಿದ್ದರು. ಪತಿ ಮೃತಪಟ್ಟ ಬಳಿಕ, ಅವರು ಸುಬ್ರಮಣಿ ಎಂಬಾತನ ಜೊತೆ ಸಲುಗೆ ಬೆಳೆಸಿದ್ದರು ಎನ್ನಲಾಗಿದೆ. ಇವರ ಅನೈತಿಕ ಸಂವಂಧವೇ ಈ ಘೋರ ಕೃತ್ಯಕ್ಕೆ ಕಾರಣವಾಗಿದೆ.

ನಿನ್ನೆ ರಾತ್ರಿ ಸಲ್ಮಾ ಮತ್ತು ಸುಬ್ರಮಣಿ ನಡುವೆ ತೀವ್ರ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಸುಬ್ರಮಣಿ ಆಕೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆಯಾದ ಬಳಿಕ, ಆತ ಸಲ್ಮಾ ಮೃತದೇಹವನ್ನು ಬಟ್ಟೆಯಲ್ಲಿ ಸುತ್ತಿ, ತಿಲಕ್ ನಗರ ಮುಖ್ಯರಸ್ತೆಯಲ್ಲಿ ನಿಂತಿದ್ದ ಆಟೋದಲ್ಲಿ ಇಟ್ಟು ಪರಾರಿಯಾಗಿದ್ದಾನೆ. ಬೆಳಿಗ್ಗೆ ತಿಲಕ್ ನಗರ ಮುಖ್ಯರಸ್ತೆಯ ಬಳಿ ನಿಂತಿದ್ದ ಆಟೋದಲ್ಲಿ ಸಲ್ಮಾ ಅವರ ಶವ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಡಲೇ ತಿಲಕ್ ನಗರ ಪೊಲೀಸರು ಮತ್ತು ಫೋರೆನ್ಸಿಕ್ ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

ಈ ಸಂಬಂಧ ತಿಲಕ್ ನಗರ ಪೊಲೀದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮಾಡಿ ಎಸ್ಕೇಪ್ ಆಗಿರುವ ಆರೋಪಿ ಪ್ರಿಯಕರ ಸುಬ್ರಮಣಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಸುಬ್ರಮಣಿ ಹಳೇ ಅಪರಾಧ ಹಿನ್ನೆಲೆ ಹೊಂದಿರುವ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ : ರೈತರ ಮೇಲೆ ಖಾಸಗಿ ಕಂಪನಿ ‘ಸ್ಟೆರ್‌ಲೈಟ್’ ಗೂಂಡಾಗಿರಿ – ವಿದ್ಯುತ್ ಲೈನ್ ಕಾಮಗಾರಿ ನೆಪದಲ್ಲಿ ಕೃಷಿ ಭೂಮಿ ನಾಶ!







