ಪುತ್ತೂರು: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೋಮು ದ್ವೇಷವನ್ನು ಹುಟ್ಟಿಸುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಮತ್ತು ಮಹಿಳೆಯರ ಘನತೆಗೆ ಧಕ್ಕೆ ತರುವ ಭಾಷಣ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬುವರು ದೂರು ನೀಡಿದ್ದಾರೆ.

ಈಶ್ವರಿ ಪದ್ಮುಂಜ ಅವರ ದೂರಿನ ಆಧಾರದ ಮೇಲೆ, ಪೊಲೀಸರು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಯ ಕಲಂ 79, 196, 290, 302 ಮತ್ತು 3(5) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.
ಇದನ್ನೂ ಓದಿ : ‘ಲವ್ ಮಾಡು.. ಇಲ್ಲ ಅಂದ್ರೆ ಮಕ್ಕಳನ್ನು ಕೊಲ್ಲುವೆ’ – ಗೃಹಿಣಿಗೆ ಪಾಗಲ್ ಪ್ರೇಮಿಯಿಂದ ಟಾರ್ಚರ್!
Author: Btv Kannada
Post Views: 341







