RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪೊಲೀಸರ ಬುಲಾವ್ – ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ದಕ್ಷಿಣ ಕನ್ನಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಹಿರಿಯ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸರು ಬುಲಾವ್ ನೀಡಿದ್ದಾರೆ. ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕೋಮು ದ್ವೇಷವನ್ನು ಹುಟ್ಟಿಸುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮಾಡಿದ ಭಾಷಣದ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (FIR) ದಾಖಲಾದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಭಾಷಣದಲ್ಲಿ ಧಾರ್ಮಿಕ ವೈಷಮ್ಯ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಅಂಶಗಳಿವೆ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಭಟ್ ಅವರ ಮನೆಗೆ ಖುದ್ದಾಗಿ ತೆರಳಿ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್‌ನಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸ್ಪಷ್ಟವಾಗಿ ಸೂಚಿಸಲಾಗಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೇಳಿಕೆಗಳು ಆಗಾಗ್ಗೆ ವಿವಾದಕ್ಕೆ ಕಾರಣವಾಗುತ್ತಿದ್ದು, ಈ ನೋಟಿಸ್ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳು ಮತ್ತು ವಿಚಾರಣೆಗೆ ಭಟ್ ಅವರು ಹಾಜರಾಗುತ್ತಾರೆಯೇ ಎಂಬುದರ ಬಗ್ಗೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ನೆಲಮಂಗಲದಲ್ಲಿ ಮತ್ತೆ ಶುರುವಾಯ್ತಾ ‘ಎಲೆಕ್ಷನ್’​ ವಾರ್ ? – ಗ್ರಾ. ಪಂ ಸದಸ್ಯ ಸಲೀಂ ಮೇಲೆ ರೌಡಿಶೀಟರ್ ಮುಬಾರಕ್ ಫೈರಿಂಗ್!

Btv Kannada
Author: Btv Kannada

Read More