ಬೆಂಗಳೂರು : ಇದು BTV ಬಿಗ್ ಇಂಪ್ಯಾಕ್ಟ್ ಸ್ಟೋರಿ.. ನೆಲಮಂಗಲದ ಕಳಲುಘಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಗೀತಾಮಣಿ ಕಿರುಕುಳಕ್ಕೆ ಬೇಸತ್ತು ಲೈಬ್ರೆರಿಯನ್ ರಾಮಚಂದ್ರಯ್ಯ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ 3 ತಿಂಗಳಿಂದ ಸಂಬಳ ನೀಡದೇ PDO ಗೀತಾಮಣಿ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ BTV ನಿರಂತರ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಇದೀಗ ಬಿಟಿವಿ ವರದಿ ಬೆನ್ನಲ್ಲೇ PDO ಗೀತಾಮಣಿ ಅವರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಲೈಬ್ರೆರಿಯನ್ ರಾಮಚಂದ್ರಯ್ಯ ಆತ್ಮಹತ್ಯೆ ಕೇಸ್ ಸಂಬಂಧ ಪಿಡಿಓ ಗೀತಾಮಣಿ ವಿರುದ್ದ FIR ದಾಖಲಾಗಿದ್ದು, ಅವರನ್ನು ಅಮಾನತು ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎಸ್ ಆದೇಶ ಕೊಟ್ಟಿದ್ದಾರೆ.
ಕಳೆದ 25 ವರ್ಷಗಳಿಂದ ರಾಮಚಂದ್ರಯ್ಯ ಅರೆಕಾಲಿಕ ಗ್ರಂಥಾಲಯ ಮೇಲ್ವಿಚಾರಕನಾಗಿ ಕೆಲಸ ಮಾಡ್ತಿದ್ದರು. ಕಳೆದ 3 ತಿಂಗಳಿಂದ ಸಂಬಳ ನೀಡದೇ PDO ಗೀತಾಮಣಿ ಕಿರುಕುಳ ನೀಡುತ್ತಿದ್ದರು. ಕಳಲುಘಟ್ಟ ಗ್ರಾ.ಪಂಚಾಯತ್ PDO ಗೀತಾಮಣಿ ವಿರುದ್ದ ರಾಮಚಂದ್ರಯ್ಯಗೆ ಬಯೋಮೆಟ್ರಿಕ್ ಹಾಜರಾತಿ ಹಾಕದೇ ತೊಂದರೆ ನೀಡಿದ್ದರು. PDO ಗೀತಾಮಣಿ ಸತತ ಕಿರುಕುಳಕ್ಕೆ ಮನನೊಂದು ರಾಮಚಂದ್ರಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದನ್ನೂ ಓದಿ : ತನ್ನ ತಾಯಿಯ ಚಿನ್ನ ಕದ್ದು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಮರ್ಡರ್!







