ಮಂಗಳೂರು : ಮಂಗಳೂರಿನ ನಟೋರಿಯಸ್ ರೌಡಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ನಡೆದಿದೆ. ನೌಫಾಲ್ ಅಲಿಯಾಸ್ ಟೊಪ್ಪಿ ನೌಫಾಲ್ ಕೊಲೆಯಾದ ನಟೋರಿಯಸ್ ರೌಡಿ.
ಟೊಪ್ಪಿ ನೌಫಾಲ್ ಮಂಗಳೂರು ನಗರದ ಬಜಾಲ್ ಫೈಸಲ್ ನಗರ ನಿವಾಸಿಯಾಗಿದ್ದು, ಈತ 2017ರಲ್ಲಿ ಫರಂಗಿಪೇಟೆಯಲ್ಲಿ ಅಡ್ಯಾರ್‌ನ ರೌಡಿ ಜಿಯಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ನೌಫಾಲ್ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದ.
ನೌಫಾಲ್ ಮಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಿದ ಬಳಿಕ ಕಾಸರಗೋಡು ಭಾಗದಲ್ಲಿ ಸಕ್ರಿಯವಾಗಿದ್ದ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಉಪ್ಪಳ ಗೇಟ್ ಬಳಿಗೆ ಕರೆಸಿದ್ದ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ. ಘಟನಾ ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಿದ್ದಾರೆ.
ಇದನ್ನೂ ಓದಿ : ಕನ್ನಡ ರಾಜ್ಯೋತ್ಸವದಂದು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಯೆಲ್ಲೋ ಮಾರ್ಗದಲ್ಲಿ 5ನೇ ರೈಲು ಸಂಚಾರ ಆರಂಭ!







