ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!

ಬೆಂಗಳೂರು : ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯ ನಗರದ ಮಿಲ್ಕ್ ಕಾಲೋನಿಯಲ್ಲಿ ನಡೆದಿದೆ. ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ದಾವಣಗೆರೆ ಮೂಲದ ಸುಪ್ರಿಯ (25) ಮೃತ ಯುವತಿ.

ಎಂಬಿಎ ವ್ಯಾಸಂಗ ಮಾಡ್ತಿದ್ದ ಸುಪ್ರಿಯಾ, ಬೈಕ್‌ ರೈಡಿಂಗ್ ತರಬೇತಿ ಕೂಡ ಪಡೆಯುತ್ತಿದ್ದಳು. ಮಿಲ್ಕ್ ಕಾಲೋನಿಯಲ್ಲಿ ಕಳೆದ 2 ವರ್ಷ 8 ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದಳು. 3ನೇ ಫ್ಲೋರ್‌ನಲ್ಲಿದ್ದ ಸುಪ್ರಿಯಾ ಮನೆ ಬಾಗಿಲು ಕಳೆದ 2 ದಿನಗಳಿಂದಲೂ ಬಂದ್‌ ಆಗಿತ್ತು. ಅನುಮಾನಗೊಂಡ ಮನೆ ಮಾಲೀಕ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಫ್ಯಾನ್‌ಗೆ ನೇಣು ಬಿಗಿದು ತುಂಡಾಗಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಯುಡಿಆರ್‌ (ಅನ್ ನ್ಯಾಚುರಲ್ ಡೆತ್ ರಿಪೋರ್ಟ್) ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಮಣ್ಯನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಇಂಗ್ಲೀಷ್‌ ಭಾಷೆ ನಮ್ಮ ಕನ್ನಡತನಕ್ಕೆ ಒಡ್ಡುತ್ತಿರುವ ಸವಾಲನ್ನು ತಪ್ಪಿಸಬೇಕಿದೆ – ಸಚಿವ ಕೆ.ಜೆ.ಜಾರ್ಜ್!

Btv Kannada
Author: Btv Kannada

Read More