ಕೊಡವ ಭಾಷಿಕ ಒಕ್ಕೂಟ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ – ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಕೊಡವ ಭಾಷಿಕ ಒಕ್ಕೂಟದ ಪದಾಧಿಕಾರಿಗಳ ನಿಯೋಗವು ಭೇಟಿ ಮಾಡಿದೆ. ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಈ ನಿಯೋಗವು ಸಿಎಂ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ.

ನಿಯೋಗವು ಮಂಡಿಸಿದ ಎಲ್ಲಾ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ಗಮನವಿಟ್ಟು ಆಲಿಸಿದರು. ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಈ ವೇಳೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಚಿವರಾದ ಬೋಸರಾಜ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಈ ಭೇಟಿಯು ಕೊಡವ ಭಾಷಿಕರ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ : 45 ಸಿನಿಮಾದ ‘ಆಫ್ರೋ ಟಪಾಂಗ್’ ಸಾಂಗ್ ರಿಲೀಸ್ – ಭರ್ಜರಿ ಸ್ಟೆಪ್ ಹಾಕಿದ ಶಿವಣ್ಣ, ಉಪ್ಪಿ, ರಾಜ್​ ಬಿ. ಶೆಟ್ಟಿ!

Btv Kannada
Author: Btv Kannada

Read More