ಹುಬ್ಬಳ್ಳಿ : ವಾಣಿಜ್ಯ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದ್ದು, ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಮಲ್ಲಿಕ್ ಅದೋನಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯ ಪಿಎಸ್‌ಐ ವಿಶ್ವನಾಥ್ ಅವರು ಮಲ್ಲಿಕ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿತ್ತು. ಘಟನೆ ಬಗ್ಗೆ ವಿಚಾರಣೆ ನಡೆಸಲು ಹೋದ ಪೊಲೀಸರ ಮೇಲೆ ಮಲ್ಲಿಕ್ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಪೊಲೀಸರು ಹಾಗೂ ಆರೋಪಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಯುವತಿ ಜೊತೆ ಪತಿ ಅನೈತಿಕ ಸಂಬಂಧ ಆರೋಪ – ಮನನೊಂದು ಪತ್ನಿ ಆತ್ಮಹತ್ಯೆ!

Author: Btv Kannada
Post Views: 520