ಮಂಡ್ಯ : ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯೊಬ್ಬಳನ್ನು ರಕ್ಷಿಸಲು ಹೋಗಿ ನಾಲ್ವರು ಮಕ್ಕಳು ನಾಲೆಯಲ್ಲಿ ಕೊಚ್ಚಿ ಹೋಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇನ್ನಿಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

14 ವರ್ಷದ ಬಾಲಕಿ ಆಯಿಷಾಳನ್ನು ಮೊದಲು ರಕ್ಷಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ. 13 ವರ್ಷದ ಆಫ್ರಿನ್ ಮೃತದೇಹವೂ ಪತ್ತೆಯಾಗಿದೆ. ನಾಪತ್ತೆಯಾಗಿರುವ ಹನಿ ಮತ್ತು ಥರ್ಬಿಮ್ ಗಾಗಿ ಹುಡುಕಾಟ ತೀವ್ರಗೊಂಡಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಈ ಘಟನೆಯು ಸ್ಥಳೀಯರಲ್ಲಿ ತೀವ್ರ ದುಃಖ ಮತ್ತು ಆತಂಕವನ್ನು ಮೂಡಿಸಿದ.
Author: Btv Kannada
Post Views: 373







