ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ – 20 ಮಂದಿ ದುರ್ಮರಣ!

ತೆಲಂಗಾಣ : ತೆಲಂಗಾಣದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಮೇಲೆ ಟಿಪ್ಪರ್ ಲಾರಿ ಮಗುಚಿ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ತೆಲಂಗಾಣದ ಸರ್ಕಾರಿ ಬಸ್​ನಲ್ಲಿ 70 ಮಂದಿ ಪ್ರಯಾಣಿಸುತ್ತಿದ್ದರು. ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್​ ಮೇಲೆ ಜಲ್ಲಿಕಲ್ಲು ತುಂಬಿದ್ದ ಟಿಪ್ಪರ್ ಮುಗುಚಿ ಬಿದ್ದಿದ್ದು, ಟಿಪ್ಪರ್ ಲಾರಿ ಗುದ್ದಿದ ಹೊಡೆತಕ್ಕೆ ಸರ್ಕಾರಿ ಬಸ್ ನಜ್ಜು ಗುಜ್ಜಾಗಿದೆ. ಈ ಭೀಕರ ಅಪಘಾತದಲ್ಲಿ 11 ಮಹಿಳೆ ಸೇರಿ ಒಟ್ಟು 20 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಹಲವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೃತಪಟ್ಟವರಲ್ಲಿ ಬಸ್ ಪ್ರಯಾಣಿಕರು, ಬಸ್ ಮತ್ತು ಟಿಪ್ಪರ್ ಚಾಲಕರು ಸೇರಿದ್ದಾರೆ.

ಇದನ್ನೂ ಓದಿ : ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ದಿಢೀರ್ ರದ್ದು!

Btv Kannada
Author: Btv Kannada

Read More