ಸರ್ಕಾರಿ ಶಾಲೆ ಆವರಣದಲ್ಲಿ ಶ್ರೀಗಂಧ ಮರಗಳ ಕಳ್ಳತನ – ರಾತ್ರೋರಾತ್ರಿ 4 ಮರ ಕಡಿದು ಖದೀಮರು ಎಸ್ಕೇಪ್!

ಗುಂಡ್ಲುಪೇಟೆ : ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶ್ರೀಗಂಧ ಮರಗಳು ಕಳ್ಳತನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಬಿಡು ಗ್ರಾಮದಲ್ಲಿ ನಡೆದಿದೆ.

ಶಿಕ್ಷಕರು ಶಾಲಾ ಆವರಣದಲ್ಲಿ ಬೆಳೆಸಿದ್ದ 20ಕ್ಕೂ ಹೆಚ್ಚು ಶ್ರೀಗಂಧ ಮರಗಳ ಪೈಕಿ, ರಜೆಯ ದಿನವನ್ನು ಬಳಸಿಕೊಂಡು ರಾತ್ರೋರಾತ್ರಿ ನುಗ್ಗಿದ ಖದೀಮರು 4 ಶ್ರೀಗಂಧ ಮರಗಳನ್ನು ಕಡಿದು ಸಾಗಿಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಶಾಲಾ ಶಿಕ್ಷಕರು ಈ ಬಗ್ಗೆ ತಕ್ಷಣವೇ ಗುಂಡ್ಲುಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಶಾಲಾ ಶಿಕ್ಷಕರು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಮುಜರಾಯಿ ಇಲಾಖೆಯ ನಿರ್ಲಕ್ಷ್ಯ – ದೇವಸ್ಥಾನದ ಗೇಟ್ ಬಿದ್ದು ಬಾಲಕನ ಕಾಲು ಕಟ್!

Btv Kannada
Author: Btv Kannada

Read More