ಬಿಹಾರ ಚುನಾವಣೆ ಬಳಿಕ ದೆಹಲಿಗೆ ಸಿಎಂ ಸಿದ್ದರಾಮಯ್ಯ – ಸಂಪುಟ ಪುನಾರಚನೆ ಕುರಿತು ‘ಕೈ’ ಹೈಕಮಾಂಡ್ ಜೊತೆ ಮಹತ್ವದ ಚರ್ಚೆ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ ಕ್ರಾಂತಿಯ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ. ಬಿಹಾರ ಚುನಾವಣೆಗಳು ಮುಗಿದ ನಂತರ ನವೆಂಬರ್ 15ರಂದು ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಕರ್ನಾಟಕ ಸಚಿವ ಸಂಪುಟದಲ್ಲಿ ಬದಲಾವಣೆ ತರುವ ಕುರಿತು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೆಯೋ ಆ ರೀತಿ ನಾನು ನಡೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘RX ಸೂರಿ’ ನಿರ್ದೇಶಕನ ಹೊಸ ಸಿನಿಮಾ ಅನೌನ್ಸ್ – ಯುವ ನಟ ಸಂದೀಪ್ ನಾಗರಾಜ್ ಜೊತೆ ಕೈ ಜೋಡಿಸಿದ ಡೈರೆಕ್ಟರ್ ಶ್ರೀಜೈ!

Btv Kannada
Author: Btv Kannada

Read More