ದ್ವಿತೀಯ PU ಫಲಿತಾಂಶ ಪ್ರಕಟ – ರಾಜ್ಯಕ್ಕೆ ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌.. ಶೇ 73.45 ವಿದ್ಯಾರ್ಥಿಗಳು ಉತ್ತೀರ್ಣ!

ಬೆಂಗಳೂರು : 2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 93.90 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ 93.57 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಟಾಪ್ 10 ಸ್ಥಾನಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣ, ಕೊಡಗು, ಬೆಂಗಳೂರು ಉತ್ತರ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ ಕ್ರಮವಾಗಿ ಪಡೆದುಕೊಂಡಿದೆ.

ಕಲಾ ವಿಭಾಗದಲ್ಲಿ ಬಳ್ಳಾರಿ ಮೂಲದ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ

  • 600 ಅಂಕಗಳಲ್ಲಿ 597 ಅಂಕ ಪಡೆದಿರುವ ಸಂಜನಾ ಬಾಯಿ

  • ಬಳ್ಳಾರಿಯ ನಿರ್ಮಲಾಗೆ 596 ಅಂಕಗಳು ಸೆಕೆಂಡ್​

77.88 ಬಾಲಕಿಯರು ಶೇಕಡಾವಾರು ಉತ್ತೀರ್ಣ ಆಗಿದ್ದಾರೆ. ಬಾಲಕರು 68.20 ಶೇಕಡಾವಾರು ಉತ್ತೀರ್ಣರಾಗಿದ್ದಾರೆ. ಇನ್ನೂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಕಲಾ ವಿಭಾಗದಲ್ಲಿ 53.29 ಪರ್ಸೆಂಟ್ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 76.07 ಪರ್ಸೆಂಟ್ ಬಂದಿದೆ. ವಿಜ್ಞಾನ ವಿಭಾಗದಲ್ಲಿ 82.54 ಪರ್ಸೆಂಟ್ ಬಂದಿದೆ ಎಂದಿದ್ದಾರೆ.

PUC ರಿಸಲ್ಟ್ ನೋಡೋದು ಹೇಗೆ..?

  • ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
  •  ಹೋಂ ಪೇಜ್​ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
  •  ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು
  •  Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.

ಇದನ್ನೂ ಓದಿ : ಲಕ್ಷ ಲಕ್ಷ ಲಂಚ ಸ್ವೀಕರಿಸುವಾಗಲೇ ‘ಲೋಕಾ’ ರೇಡ್​ – ನಂಜನಗೂಡು ಕಾವೇರಿ ನಿಗಮದ ಭ್ರಷ್ಟ ಅಧಿಕಾರಿಗಳು ಲಾಕ್!

Btv Kannada
Author: Btv Kannada

Read More