ಕಬ್ಬು MRP ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ – ಸಿಎಂ ಸಿದ್ದರಾಮಯ್ಯ!

ಕೋಲಾರ : ಕರ್ನಾಟಕದಲ್ಲಿ ಕಬ್ಬು ದರ ಏರಿಕೆಗೆ ಆಗ್ರಹಿಸಿ ರೈತರು ಬೃಹತ್‌ ಪ್ರತಿಭಟನೆ ಆರಂಭಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಕಬ್ಬು ದರ ನಿಗದಿಯ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ, ಅದು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಕೋಲಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಬ್ಬಿನ ಎಂಆರ್‌ಪಿ ದರವನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಮಹಾರಾಷ್ಟ್ರದಲ್ಲಿ ಹೆಚ್ಚು ಬೆಲೆ ನೀಡಲಾಗುತ್ತಿದ್ದು, ಅದೇ ದರವನ್ನು ರಾಜ್ಯದಲ್ಲೂ ನೀಡಬೇಕೆಂಬುದು ರೈತರ ಬೇಡಿಕೆಯಾಗಿದೆ ಎಂದರು.

ಈ ಕುರಿತು ರೈತರೊಂದಿಗೆ ಚರ್ಚಿಸಲು ಸಚಿವರಾದ ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ತಿಮ್ಮಾಪುರ್ ಮತ್ತು ಎಂ.ಬಿ. ಪಾಟೀಲ್ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ : ಕಾರಿಗೆ ಬೈಕ್ ಅಡ್ಡ ನಿಲ್ಲಿಸಿ ಪುಂಡಾಟ – ದಾರಿ ಬಿಡುವಂತೆ ಕೇಳಿದ್ದಕ್ಕೆ ಚಾಲಕನಿಗೆ ರಾಡ್‌ನಿಂದ ಹಲ್ಲೆ!

Btv Kannada
Author: Btv Kannada

Read More