ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ಅವರು ವಿಭಿನ್ನವಾದ ಸಿನಿಮಾ ಮಾಡುತ್ತಲೇ ಪ್ರೇಕ್ಷಕರ ಮನಗೆದ್ದ ಯಶಸ್ವಿ ನಟ. ಕನ್ನಡದಲ್ಲಿ ಮಾತ್ರವಲ್ಲದೆ, ತೆಲುಗು, ತಮಿಳು ಸಿನಿಮಾಗಳಲ್ಲಿಯೂ ಉಪ್ಪಿಗೆ ಬೇಡಿಕೆ ಇದೆ. ಇಂದು ನಟ ಉಪೇಂದ್ರ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕರಾದ ಉಪೇಂದ್ರ ಅವರು ಡಿಕೆಶಿಯನ್ನು ಸದಾಶಿವನಗರದ ಗೃಹಕಚೇರಿಯಲ್ಲಿ ಭೇಟಿ ಮಾಡಿದ್ದಾರೆ. ಈ ವೇಳೆ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡಿಸಿಎಂ ಶಿವಕುಮಾರ್ ಮಾತುಕತೆ ನಡೆಸಿದರು. ಈ ಬಗ್ಗೆ ಡಿಸಿಎಂ ಡಿಕೆಶಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ಕೊನೆಗೂ ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಡಾದ ರಾಜ್ಯ ಸರ್ಕಾರ – ಸಿಎಂ ನಿರ್ದೇಶನದ ಮೇರೆಗೆ ಇಂದು ಬೆಳಗಾವಿಗೆ ಹೆಚ್.ಕೆ. ಪಾಟೀಲ್!
Author: Btv Kannada
Post Views: 222







