ಸ್ಯಾಂಡಲ್‌ವುಡ್‌ನ ಪೋಷಕ ನಟ ಹಾಗೂ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹರೀಶ್ ರಾಯ್ ಈಗ ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
‘ಕೆಜಿಎಫ್ ಚಾಚಾ’ ಎಂದೇ ಖ್ಯಾತರಾಗಿದ್ದ ಹರೀಶ್ ರಾಯ್ ಓಂ, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ತಮಿಳಿನಲ್ಲೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂಡರ್ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್‌ವುಡ್‌ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್ 2ರಲ್ಲಿ ಅಭಿನಯಿಸಿದ್ದಾರೆ.
ಇದನ್ನೂ ಓದಿ : ಸರ್ಕಾರಿ ಜಾಗಗಳಲ್ಲಿ RSS ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ – ಏಕಸದಸ್ಯ ಪೀಠದ ತಡೆ ಆದೇಶ ಪ್ರಶ್ನಿಸಿದ್ದ ಸರ್ಕಾರಕ್ಕೆ ಭಾರೀ ಮುಖಭಂಗ!







