ಉಡುಪಿ : ಕಟಪಾಡಿಯ ಬಿಜೆಪಿ ನಾಯಕರೊಬ್ಬರ ಪುತ್ರ ಅಪ್ರಾಪ್ತ ಬಾಲಕಿಯೊಂದಿಗೆ ಲಾಡ್ಜ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದ್ದು, ಆತನ ವಿರುದ್ಧ ಪೋಕ್ಸೊ (POCSO) ಪ್ರಕರಣ ದಾಖಲಾಗಿದೆ. ಆರೋಪಿ ಶ್ರೀಶಾಂತ್ ಪೂಜಾರಿ (21) ಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಶ್ರೀಶಾಂತ್ ಪೂಜಾರಿ, ಕಟಪಾಡಿಯ ಬಿಜೆಪಿ ನಾಯಕರ ಪುತ್ರ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷರ ಮಗ. ಶ್ರೀಶಾಂತ್ ಪೂಜಾರಿ ಅವರು ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದರು. ಮಾಹಿತಿ ತಿಳಿದ ಬಾಲಕಿಯ ಪೋಷಕರು ಪೊಲೀಸರೊಂದಿಗೆ ಲಾಡ್ಜ್‌ಗೆ ದಾಳಿ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯು ಲಾಡ್ಜ್‌ನಲ್ಲಿ ಬಾಲಕಿಯ ವಯಸ್ಸನ್ನು ಹೆಚ್ಚಿಸಿ ತೋರಿಸಲು ನಕಲಿ ಆಧಾರ್ ಕಾರ್ಡ್ ಬಳಸಿದ್ದನು.

ಮೊದಲ ಪ್ರಕರಣದ ಸುದ್ದಿ ತಿಳಿಯುತ್ತಿದ್ದಂತೆ, ಮತ್ತೊಬ್ಬ ಅಪ್ರಾಪ್ತ ಬಾಲಕಿ ಕೂಡ ಶ್ರೀಶಾಂತ್ ಪೂಜಾರಿ ವಿರುದ್ಧ ದೂರು ದಾಖಲಿಸಿದ್ದಾಳೆ. ಆತ ತನಗೂ ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಉಭಯ ಪ್ರಕರಣಗಳಲ್ಲೂ ಪೊಲೀಸರು ಆರೋಪಿ ಶ್ರೀಶಾಂತ್ ಪೂಜಾರಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಇದನ್ನೂ ಓದಿ : ವೈದ್ಯರ ನಿರ್ಲಕ್ಷ – ಅವಳಿ ಗಂಡು ಮಕ್ಕಳು ಸಾವು!







