ವಿ. ಸುನೀಲ್ ಕುಮಾರ್ ಪುತ್ರಿಗೆ ಶೇ 97 ಅಂಕ – ಮಗಳ PUC ಫಲಿತಾಂಶಕ್ಕೆ ಸಂತಸ ಹಂಚಿಕೊಂಡ ಬಿಜೆಪಿ ಶಾಸಕ!

ಬೆಂಗಳೂರು : 2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 93.90 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರ ಮಗಳು ಕೂಡ ಉತ್ತಮ ಅಂಕಗಳೊಂದಿಗೆ ರ್ಯಾಂಕ್ ಪಡೆದುಕೊಂಡಿದ್ದಾರೆ. ತಮ್ಮ ಮಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬಿಜೆಪಿ ಶಾಸಕ ಸುನಿಲ್ ಕುಮಾರ್ ಮಗಳು ಉತ್ತಮ ಅಂಕ ಗಳಿಸಿರುವ ಸಂಭ್ರಮವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿನಂದನೆಗಳು ಮಗಳೇ.. ಓದಿಯಾಯ್ತಾ ಎಂದು ಪ್ರಶ್ನಿಸಿದಾಗಲೆಲ್ಲ ” ಒಳ್ಳೆ ಮಾರ್ಕ್ಸ್ ತೆಗೆದರೆ ಆಯ್ತಲ್ವಾ ಈಗ ಕಿರಿಕಿರಿ ಮಾಡಬೇಡಿ” ಎಂದು ಹುಸಿಕೋಪ ಪ್ರದರ್ಶಿಸುತ್ತಿದ್ದ ಮುದ್ದಿನ ಮಗಳು ಪ್ರೇರಣಾ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.97 ರಷ್ಟು ಅಂಕ ಪಡೆದು ಉತ್ತೀರ್ಣಳಾಗಿದ್ದಾಳೆ.‌ ಪರೀಕ್ಷೆಯೆಂದರೆ ಮಕ್ಕಳಿಗಿಂತ ಹೆತ್ತವರಿಗೆ ಕಾಳಜಿ ಹೆಚ್ಚು. ಆದರೆ ನಾವೆಂದೂ ಅಂಕ ಗಳಿಕೆಯ ಒತ್ತಡವನ್ನು ಅವಳ ಮೇಲೆ ಹೇರಿರಲಿಲ್ಲ. ಆದರೆ ತನ್ನ ಜವಾಬ್ದಾರಿಯನ್ನು ಅರಿತು ಪರಿಶ್ರಮದಿಂದ ಓದಿದಳು. ಜ್ಞಾನಸುಧಾದ ಉಪನ್ಯಾಸಕರ ತಂಡ ಸೂಕ್ತ ಮಾರ್ಗದರ್ಶನ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲೇಬೇಕು ಎಂದಿದ್ದಾರೆ.
ಒಬ್ಬ ವಿಧೇಯ ವಿದ್ಯಾರ್ಥಿನಿಯಾಗಿ ಓದು ಹಾಗೂ ಮುಂದಿನ ಗುರಿಯೆಡೆಗಿನ ನಿನ್ನ ಸ್ಪಷ್ಟತೆಯ ಬಗ್ಗೆ ನಾನು ಹೆಮ್ಮೆ ಪಡುತ್ತೇನೆ. ವಿದ್ಯಾರ್ಥಿ ಜೀವನದಲ್ಲಿ ಸುಖಕ್ಕಿಂತ ಪರಿಶ್ರಮದ ಹಾದಿ ಮುಖ್ಯ ಎಂಬ ನಮ್ಮ ಕಿವಿ ಮಾತನ್ನು ಸದಾ ಮನಸಿನಲ್ಲಿಟ್ಟುಕೊಂಡಿದ್ದ ಮಗಳು ಆರು ಬಾರಿ ಪೂರ್ವಸಿದ್ಧತಾ ಪರೀಕ್ಷೆ ಬರೆದು ನಿರಂತರ ಶ್ರಮ ವಹಿಸಿದ್ದಳು. ತನ್ನ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂಬ ಬೇಸರ ಅವಳಿಗಿದ್ದರೂ ತಂದೆಯಾಗಿ ಅವಳ ಈ ಸಾಧನೆ ಸಂತೋಷ ನೀಡಿದೆ. ಮತ್ತೊಮ್ಮೆ ಅಭಿನಂದನೆಗಳು ಮಗಳೆ… ಪುಸ್ತಕದ ಪಾಠದಷ್ಟೆ ಜೀವನದ ಪಾಠವೂ ಮುಖ್ಯ. ಆ ಸವಾಲನ್ನು ಅರ್ಥ ಮಾಡಿಕೊಳ್ಳುವುದೇ ನಿಜವಾದ ಭವಿಷ್ಯ ಎಂದು ಸುನಿಲ್ ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ : ರವಿ ಬಸ್ರೂರು ನಿರ್ದೇಶನದ “ವೀರ ಚಂದ್ರಹಾಸ” ಟ್ರೇಲರ್ ರಿಲೀಸ್.. ಏ.18ಕ್ಕೆ ಸಿನಿಮಾ ತೆರೆಗೆ!

Btv Kannada
Author: Btv Kannada

Read More