ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡಗೆ ಬಿಗ್ ಶಾಕ್ – ಜಾಮೀನು ರದ್ದು ಆದೇಶ ಮೇಲ್ಮನವಿ ವಜಾ!

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪವಿತ್ರಾ ಗೌಡ ಅವರು ತಮ್ಮ ಜಾಮೀನು ರದ್ದು ಆದೇಶವನ್ನು ಪುನರ್ ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಆದೇಶ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಹಿಂದೆ ಕರ್ನಾಟಕ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಸರ್ಕಾರದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು.

ಸುಪ್ರೀಂಕೋರ್ಟ್‌ನಿಂದ ಜಾಮೀನು ರದ್ದಾದ ಬಳಿಕ, ಆ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ಕೋರಿ ಆರೋಪಿ ಪವಿತ್ರಾ ಗೌಡ ಅವರು ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠವು ಅದನ್ನು ವಜಾ ಮಾಡಿದೆ. ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್, “ನಾವು ತೀರ್ಪು ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಸೂಕ್ಷ್ಮವಾಗಿ ಪರಿಶೀಲನೆ ನಡೆಸಿ ಆದೇಶ ನೀಡಿದ್ದೆವೆ. ಮತ್ತೊಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : ಬೆಂಗಳೂರಿನ RTO ಕಚೇರಿಗಳ ಮೇಲೆ ಲೋಕಾಯುಕ್ತ ಮೆಗಾ ರೇಡ್​ – ನ್ಯಾ. ಬಿ.ಎಸ್ ಪಾಟೀಲ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ‘ಕರ್ಮಕಾಂಡ’ ಬಯಲು!!

Btv Kannada
Author: Btv Kannada

Read More