`Iʼll Marry Vijay’- ಕೊನೆಗೂ ವಿಜಯ್​ನ ಮದುವೆಯಾಗುವುದಾಗಿ ಒಪ್ಪಿಕೊಂಡ ರಶ್ಮಿಕಾ!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಅವರ ಮದುವೆ ವಿಷಯ ಇತ್ತೀಚೆಗೆ ಸಾಕಷ್ಟು ಚರ್ಚೆಯಲ್ಲಿದೆ. ಈ ಜೋಡಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದೆ ಎಂಬ ಸುದ್ದಿ ಹರಿದಾಡಿದ್ದು, ಇದಕ್ಕೆ ರಶ್ಮಿಕಾ ಮಂದಣ್ಣ ಕಡೆಯಿಂದ ಸ್ಪಷ್ಟ ಉತ್ತರ ಸಿಕ್ಕಿರಲಿಲ್ಲ. ಇದೀಗ ರಶ್ಮಿಕಾ ಮಂದಣ್ಣ ತಾವು ವಿಜಯ್ನ ಮದುವೆ ಆಗೋದಾಗಿ ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್ಫ್ರೆಂಡ್’ ಸಿನಿಮಾ ನವೆಂಬರ್ 7ರಂದು ರಿಲೀಸ್ ಆಗಿದೆ. ಈ ಚಿತ್ರದ ಪ್ರಚಾರದಲ್ಲಿ ರಶ್ಮಿಕಾ ಭಾಗಿ ಆಗಿದ್ದಾರೆ. ಈ ವೇಳೆ ರಶ್ಮಿಕಾಗೆ ವಿವಿಧ ಪ್ರಶ್ನೆಗಳು ಎದುರಾಗಿವೆ. ಇದರಲ್ಲಿ ಅವರ ಮದುವೆ ವಿಚಾರದ ಬಗ್ಗೆ ಹೆಚ್ಚು ಪ್ರಶ್ನೆಗಳು ಎದುರಾಗಿವೆ.

‘ನಿಮ್ಮ ಬಗ್ಗೆ ಒಂದು ವದಂತಿ ಕೇಳಿ ಬಂದಿರುತ್ತದೆ. ಆದರೆ, ಅದು ನಿಜವಾಗಿರುತ್ತದೆ. ಯಾವುದು ಅದು’ ಎಂದು ರಶ್ಮಿಕಾಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ನಗುತ್ತಾ ಉತ್ತರಿಸಿದ ಅವರು, ‘ಏನು ಹೇಳಬಹುದು? ಅದು ಎಲ್ಲರಿಗೂ ಗೊತ್ತಿದೆ’ ಎಂದರು. ಈ ಮೂಲಕ ವಿಜಯ್ ಜೊತೆಗಿನ ನಿಶ್ಚಿತಾರ್ಥ ವಿಚಾರವನ್ನು ಅವರು ಬಹುತೇಕ ಖಚಿತಪಡಿಸಿದರು.

ಯಾರನ್ನು ಮದುವೆ ಆಗುತ್ತೀರಿ ಎಂದು ಕೂಡ ಕೇಳಲಾಯಿತು. ಇದಕ್ಕೆ ರಶ್ಮಿಕಾ ಮಂದಣ್ಣ ಅವರು, ಹೌದು ‘ವಿಜಯ್ ಅವರನ್ನು ಮದುವೆ ಆಗ್ತೀನಿ’ ಎಂದಿದ್ದಾರೆ. ಈ ಮೂಲಕ ವಿಜಯ್ ದೇವರಕೊಂಡ ಅವರನ್ನು ಮದುವೆ ಆಗುವುದಾಗಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ : ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ಕೊಟ್ಟ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ- ಪ್ರತಿ ಟನ್ ಕಬ್ಬಿಗೆ 3,350 ರೂ.!

Btv Kannada
Author: Btv Kannada

Read More