ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಇಬ್ಬರ ದುರ್ಮರಣ!

ಚಿಕ್ಕಮಗಳೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ‌ ಗ್ರಾಮದ ಬಳಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ 69 ವರ್ಷದ ಕುಮಾರಪ್ಪ, 35 ವರ್ಷದ ಸತೀಶ್​​ ಮೃತ ದುರ್ದೈವಿಗಳು. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ರೈ ರೈ ರೈ ರೈಮಿಂಗ್.. ‘ಆಪರೇಷನ್ ಲಂಡನ್ ಕೆಫೆ’ಯಲ್ಲಿ ಮೇಘಾ ಶೆಟ್ಟಿ ಮಿಂಚಿಂಗ್ – ನ.28ಕ್ಕೆ ಸಿನಿಮಾ ತೆರೆಗೆ!

Btv Kannada
Author: Btv Kannada

Read More