ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸಲ್ಲಿ ಇಬ್ಬರು ಹಿರಿಯ ಅಧಿಕಾರಿಗಳ ತಲೆದಂಡವಾಗಿದ್ದು, ಓರ್ವ ಅಧಿಕಾರಿಯನ್ನು ಎತ್ತಂಗಡಿ ಮಾಢಲಾಗಿದೆ. ಜೈಲು ಸೂಪರಿಂಟೆಂಡೆಂಟ್ ಮ್ಯಾಗೇರಿ, ಸಹಾಯಕ ಸೂಪರಿಂಟೆಂಡೆಂಟ್ ಅಶೋಕ್ ಭಜಂತ್ರಿಯನ್ನು ಅಮಾನತು ಮಾಡಲಾಗಿದೆ.

ಇನ್ನು ಚೀಫ್ ಸೂಪರಿಂಟೆಂಡೆಂಟ್ ಸುರೇಶ್ ಅವರನ್ನು ಕೂಡ ಎತ್ತಂಗಡಿ ಮಾಡಲಾಗಿದೆ. ಜೈಲು ಅಧಿಕಾರಿಗಳ ಮೇಲೆ ಗೃಹ ಸಚಿವ ಪರಮೇಶ್ವರ್ ಕ್ರಮ ಕೈಗೊಂಡಿದ್ದು, ಓರ್ವ IPS ಅಧಿಕಾರಿ ಜೈಲು ಸೂಪರಿಂಟೆಂಡೆಂಟ್ ಆಗಿ ನೇಮಕ ಮಾಡಿದ್ದಾರೆ. ADGP ಹಿತೇಂದ್ರ ಕುಮಾರ್ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸುವಂತೆ ಸಚಿವ ಪರಮೇಶ್ವರ್ ಆದೇಶ ನೀಡಿದ್ದಾರೆ.

ಈ ಸಂಬಂಧ ಆದಷ್ಟು ಬೇಗ ವರದಿ ನೀಡುವಂತೆ ಸೂಚನೆ ಕೊಟ್ಟಿದ್ದಾರೆ. ಹಿರಿಯ ಅಧಿಕಾರಿಗಳ ಜೊತೆ ಗೃಹ ಸಚಿವ ಪರಮೇಶ್ವರ್ ಸಭೆ ನಡೆಸಿದ್ದು, ಸತತ 2 ಗಂಟೆಗಳ ಕಾಲ ಸಭೆ ನಡೆಸಿ ಗೃಹ ಸಚಿವರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಕೈದಿಗಳಿಗೆ ರಾಜಾತಿಥ್ಯ ಕೇಸಲ್ಲಿ ನಟ ಧನ್ವೀರ್ಗೆ ವಿಚಾರಣೆ ಬಿಸಿ!
Author: Btv Kannada
Post Views: 298







