ದೆಹಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಹೈ ಅಲರ್ಟ್​ – ಹದ್ದಿನ ಕಣ್ಣಿಟ್ಟ ಪೊಲೀಸರು!

ಬೆಂಗಳೂರು : ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಹಿನ್ನೆಲೆ ಬೆಂಗಳೂರಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಏರ್​ಪೋರ್ಟ್​ಗೆ ಬರುವ & ಹೋಗುವ ವಾಹನಗಳ ಮೇಲೆ‌‌ ಪೊಲೀಸರು ಹದ್ದಿನಕಣ್ಣಿಟ್ಟಿದ್ದಾರೆ.

ಏರ್ಪೋಟ್ ಭದ್ರತೆಗೆ ಹೆಚ್ಚುವರಿ ಶಸ್ತ್ರ ಸಜ್ಜಿತ ಸಿಐಎಸ್ಎಫ್​ ನಿಯೋಜನೆ ಜೊತೆಗೆ ವಿಮಾನ ನಿಲ್ದಾಣದ ಒಳ & ಹೊರ ಆವರಣದಲ್ಲಿ ಪ್ಯಾಟ್ರೋಲಿಂಗ್ ಗಸ್ತು ಹೆಚ್ಚಳ ಮಾಡಲಾಗಿದೆ. ಏರ್​ಪೋರ್ಟ್​ಗೆ ಬರುವ ಪ್ರಯಾಣಿಕರು, ಸಿಬ್ಬಂದಿಯ ತಪಾಸಣೆ ಮಾಡಲಾಗುತ್ತಿದೆ. ಪಾರ್ಕಿಂಗ್ ಏರಿಯಾ ಸೇರಿ ಎಲ್ಲೆಡೆ ಭದ್ರತಾ ಪಡೆ ‌ಅಲರ್ಟ್ ಆಗಿದೆ.

ಮೆಜೆಸ್ಟಿಕ್​ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣ​ ಬಳಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ಜೊತೆಗೆ ಶ್ವಾನದಳದಿಂದ ರೈಲು ನಿಲ್ದಾಣ ಸುತ್ತಮುತ್ತ ಪರಿಶೀಲನೆ ನಡೆಸಲಾಗಿದೆ. ಮೆಜೆಸ್ಟಿಕ್​ ಸುತ್ತಮುತ್ತ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಬಸ್​​​​ ನಿಲ್ದಾಣ, ರೈಲ್ವೆನಿಲ್ದಾಣದಲ್ಲಿ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದೆ.

ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಬೆಂಗಳೂರಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರು ಅಷ್ಟೇ ಅಲ್ಲದೇ ಹುಬ್ಬಳ್ಳಿ, ಗುಲ್ಬರ್ಗ, ವಿಜಯನಗರದಲ್ಲಿ ಪೊಲೀಸರು ಹೈ ಸೆಕ್ಯೂರಿಟಿ ಏರ್ಪಡಿಸಿದ್ದಾರೆ.

ಇದನ್ನೂ ಓದಿ : ನಟ ಧರ್ಮೇಂದ್ರ ಆರೋಗ್ಯ ಸ್ಥಿರವಾಗಿದೆ, ಅಪ್ಪ ಗುಣಮುಖರಾಗುತ್ತಿದ್ದಾರೆ – ವದಂತಿ ತಳ್ಳಿ ಹಾಕಿದ ಪುತ್ರ ಸನ್ನಿ ಡಿಯೋಲ್!

Btv Kannada
Author: Btv Kannada

Read More